Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:27 - ಪರಿಶುದ್ದ ಬೈಬಲ್‌

27 ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಈಜಿಪ್ಟಿನ ಅರಸ ಫರೋಹನ ಸಂಗಡ ಮಾತಾಡಿದಂಥ ಮೋಶೆ ಮತ್ತು ಆರೋನರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಸ್ರಾಯೆಲ್ಯರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತಾಡಿದಂಥ ಮೋಶೆ ಆರೋನರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:27
12 ತಿಳಿವುಗಳ ಹೋಲಿಕೆ  

ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋದರು. ಯೆಹೋವನು ಆಜ್ಞಾಪಿಸಿದ್ದಂತೆಯೇ ಅವರು ಮಾಡಿದರು. ಆರೋನನು ತನ್ನ ಊರುಗೋಲನ್ನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ನೆಲದ ಮೇಲೆ ಬಿಸಾಡಿದಾಗ ಅದು ಸರ್ಪವಾಯಿತು.


ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ.


ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.


ಬಳಿಕ ಯೆಹೋವನು ಮೋಶೆಯ ಸಂಗಡ ಈಜಿಪ್ಟಿನಲ್ಲಿ ಮಾತಾಡಿ,


“‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.


ಆಗ ಸಮುವೇಲನು ಜನರಿಗೆ, “ಯೆಹೋವನೇ ಸಾಕ್ಷಿ. ಯೆಹೋವನು, ಮೋಶೆ ಆರೋನರನ್ನು ಆರಿಸಿಕೊಂಡನು. ಆತನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು