Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:3 - ಪರಿಶುದ್ದ ಬೈಬಲ್‌

3 “ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಯೆಹೋವನು; ಅಬ್ರಹಾಮ ಇಸಾಕ ಯಾಕೋಬರಿಗೆ ನಾನು ಸರ್ವಶಕ್ತನಾದ ದೇವರೆಂಬ ಹೆಸರುಳ್ಳವನಾಗಿ ಕಾಣಿಸಿಕೊಂಡೆನೇ ಹೊರತು ಯೆಹೋವನು ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:3
23 ತಿಳಿವುಗಳ ಹೋಲಿಕೆ  

ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!


ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.


ಬಳಿಕ ಇಸ್ರೇಲನು ಯೋಸೇಫನಿಗೆ, “ಸರ್ವಶಕ್ತನಾದ ದೇವರು ನನಗೆ ಕಾನಾನ್ ದೇಶದ ಲೂಜ್ ಎಂಬ ಸ್ಥಳದಲ್ಲಿ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.


“ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು.


“ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಹೀಗೆನ್ನುತ್ತಾನೆ:


ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.


ನಾನು ನಿಮ್ಮಲ್ಲಿ ಸ್ನಾಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’”


ನನ್ನ ಜನರೇ, ನಿಮ್ಮನ್ನು ಸಮಾಧಿಯೊಳಗಿಂದ ಎಬ್ಬಿಸಿ ತರುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು