ವಿಮೋಚನಕಾಂಡ 6:4 - ಪರಿಶುದ್ದ ಬೈಬಲ್4 ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.