ವಿಮೋಚನಕಾಂಡ 6:8 - ಪರಿಶುದ್ದ ಬೈಬಲ್8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”