ವಿಮೋಚನಕಾಂಡ 7:1 - ಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೆಹೋವನು ಮೋಶೆಗೆ ಇಂತೆಂದನು - ನಿನ್ನನ್ನು ಫರೋಹನಿಗೆ ದೇವರ ಸ್ಥಾನದಲ್ಲಿ ನೇವಿುಸಿದ್ದೇನೆ, ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆಹೋವ ದೇವರು ಮೋಶೆಗೆ, “ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ. ನಿನ್ನ ಸಹೋದರನಾದ ಆರೋನನು ನಿನ್ನ ಪ್ರವಾದಿಯಾಗಿರುವನು. ಅಧ್ಯಾಯವನ್ನು ನೋಡಿ |
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.