Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:11 - ಪರಿಶುದ್ದ ಬೈಬಲ್‌

11 ಆಗ ರಾಜನು ತನ್ನ ವಿಧ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರಿಸಿದಾಗ ಆ ಜೋಯಿಸರೂ ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:11
25 ತಿಳಿವುಗಳ ಹೋಲಿಕೆ  

ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.


ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.


ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.


ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಅರಸನಾದ ನಿನಗೆ ರಹಸ್ಯವನ್ನು ಹೇಳಲಾಗಲಿಲ್ಲ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಅವರ ಕಾರ್ಯಗಳಲ್ಲಿ ಅವರಿಗೆ ಯಶಸ್ಸಾಗುವುದಿಲ್ಲ. ಅವರು ಮೂರ್ಖರೆಂಬುದು ಜನರೆಲ್ಲರಿಗೂ ಕಾಣುತ್ತದೆ. ಯನ್ನ, ಯಂಬ್ರರಿಗೆ ಹೀಗೆಯೇ ಆಯಿತು.


ಅವರು ತಮ್ಮ ಊರುಗೋಲುಗಳನ್ನು ನೆಲದ ಮೇಲೆ ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.


ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.


ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು