Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:13 - ಪರಿಶುದ್ದ ಬೈಬಲ್‌

13 ಯೆಹೋವನು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಮೋಶೆ ಮತ್ತು ಆರೋನರ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:13
24 ತಿಳಿವುಗಳ ಹೋಲಿಕೆ  

ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ.


ಆದರೆ ಫರೋಹನು ಮತ್ತೆ ಹೃದಯವನ್ನು ಕಠಿಣಪಡಿಸಿಕೊಂಡು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ.


ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ.


“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.


ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.


ಅವರು ತಮ್ಮ ಊರುಗೋಲುಗಳನ್ನು ನೆಲದ ಮೇಲೆ ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.


ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಅಧಿಕಾರಿಗಳನ್ನೂ ನಿನ್ನ ಜನರನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿದುಕೊಳ್ಳುವವು” ಎಂದು ಹೇಳಿದನು.


ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು.


ಇಸ್ರೇಲರು ಸ್ವತಂತ್ರರಾಗಿ ಹೋಗಲು ಫರೋಹನು ಬಿಡಲಿಲ್ಲ. ಯೆಹೋವನು ಮೋಶೆಯ ಮೂಲಕ ಹೇಳಿಸಿದಂತೆಯೇ ಇದಾಯಿತು.


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು