ವಿಮೋಚನಕಾಂಡ 7:15 - ಪರಿಶುದ್ದ ಬೈಬಲ್15 ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೆಳಿಗ್ಗೆ ನೀನು ಫರೋಹನ ಬಳಿಗೆ ಹೋಗು. ಆಗ ಅವನು ನದಿಗೆ ಹೋಗುತ್ತಿರುತ್ತಾನೆ. ಅವನನ್ನು ಭೇಟಿಯಾಗಲು ನೈಲ್ ನದಿ ತೀರದಲ್ಲೆ ನಿಂತುಕೊಂಡಿರು. ಸರ್ಪವಾಗಿ ಮಾರ್ಪಟ್ಟ ಆ ಕೋಲು ನಿನ್ನ ಕೈಯಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಅವನು ನದಿಗೆ ಹೋಗುತ್ತಾನಲ್ಲಾ. ಸರ್ಪವಾಗಿ ಮಾಡಲ್ಪಟ್ಟ ಆ ಕೋಲನ್ನು ನೀನು ಕೈಯಲ್ಲಿ ಹಿಡಿದುಕೊಂಡು ಅವನನ್ನು ಎದುರುಗೊಳ್ಳುವದಕ್ಕೆ ನೈಲ್ ನದೀತೀರದಲ್ಲಿ ನಿಂತುಕೊಂಡು ಹೀಗನ್ನಬೇಕು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಬೆಳಿಗ್ಗೆ ಫರೋಹನ ಬಳಿಗೆ ಹೋಗು. ಅವನು ಹೊರಗೆ ನದಿಯ ಬಳಿಗೆ ಹೋಗುವನು. ಆಗ ನೈಲ್ ನದಿ ತೀರದಲ್ಲಿ ಅವನೆದುರಿಗೆ ನಿಂತುಕೊಂಡು, ಸರ್ಪವಾಗಿ ಮಾಡಿದ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡಿರು. ಅಧ್ಯಾಯವನ್ನು ನೋಡಿ |