Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:21 - ಪರಿಶುದ್ದ ಬೈಬಲ್‌

21 ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯು ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರಲ್ಲಿದ್ದ ಮೀನುಗಳು ಸತ್ತುಹೋದವು; ನದಿಯು ಹೊಲಸು ನಾರಿದ್ದರಿಂದ ಐಗುಪ್ತ್ಯರು ಅದರಲ್ಲಿ ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನದಿಯಲ್ಲಿದ್ದ ಮೀನುಗಳು ಸತ್ತವು, ನದಿಯು ದುರ್ವಾಸನೆಗೊಂಡಿತು. ಈಜಿಪ್ಟಿನವರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ರಕ್ತವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:21
7 ತಿಳಿವುಗಳ ಹೋಲಿಕೆ  

ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು.


ಸಮುದ್ರದಲ್ಲಿದ್ದ ಜೀವಿಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋದವು ಮತ್ತು ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾದವು.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಆದ್ದರಿಂದ ಆತನು ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದನು, ಆಗ ಅವರ ಮೀನುಗಳೆಲ್ಲಾ ಸತ್ತುಹೋದವು.


ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.


ಬೆಸ್ತರೂ ಮೀನು ಹಿಡಿಯುವವರೂ ನೈಲ್ ನದಿಯ ನೀರು ಬತ್ತಿಹೋದದ್ದಕ್ಕಾಗಿ ದುಃಖಿಸುತ್ತಾ ಅಳುವರು. ಅವರು ಜೀವನೋಪಾಯಕ್ಕಾಗಿ ನೈಲ್ ನದಿಯನ್ನು ಆಧಾರ ಮಾಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು