ವಿಮೋಚನಕಾಂಡ 7:22 - ಪರಿಶುದ್ದ ಬೈಬಲ್22 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಐಗುಪ್ತದೇಶದ ಜೋಯಿಸರು ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವನು ಹೇಳಿದ್ದಂತೆಯೇ ಅವನು ಮೋಶೆ ಆರೋನರ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |
ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.