ವಿಮೋಚನಕಾಂಡ 7:3 - ಪರಿಶುದ್ದ ಬೈಬಲ್3 ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಟವನ್ನು ಹುಟ್ಟಿಸಿ ಐಗುಪ್ತ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ನಡಿಸಿ ನನ್ನ ಶಕ್ತಿಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿ |
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!