Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:5 - ಪರಿಶುದ್ದ ಬೈಬಲ್‌

5 ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:5
20 ತಿಳಿವುಗಳ ಹೋಲಿಕೆ  

ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.


ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.


ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.


ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.


ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.


ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.


ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.


ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


“ಈಜಿಪ್ಟ್ ದೇಶವನ್ನು ನಾನು ಬರಿದುಮಾಡುವೆನು. ಆ ದೇಶವು ಎಲ್ಲವನ್ನು ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನ್ನು ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು