Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:7 - ಪರಿಶುದ್ದ ಬೈಬಲ್‌

7 ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಫರೋಹನ ಹತ್ತಿರ ಮಾತಾಡಿದ ಕಾಲದಲ್ಲಿ ಮೋಶೆ ಎಂಭತ್ತು ವರುಷದವನೂ ಆರೋನನು ಎಂಭತ್ತುಮೂರು ವರುಷದವನೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಫರೋಹನ ಮುಂದೆ ಮಾತನಾಡುವಾಗ ಮೋಶೆಯು ಎಂಬತ್ತು ವರ್ಷದವನೂ ಆರೋನನು ಎಂಬತ್ತಮೂರು ವರ್ಷದವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:7
11 ತಿಳಿವುಗಳ ಹೋಲಿಕೆ  

“ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು.


“ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು.


ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಮೈಮೇಲಿದ್ದ ಬಟ್ಟೆಗಳು ಹರಿದುಹೋಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.


ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಯೆಹೋವನು ಮೋಶೆ ಆರೋನರಿಗೆ,


ಆರೋನನು “ಹೋರ್” ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು.


“‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು