Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:12 - ಪರಿಶುದ್ದ ಬೈಬಲ್‌

12 ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟುಹೋದರು. ಫರೋಹನ ಮೇಲೆ ಬರಮಾಡಿದ್ದ ಕಪ್ಪೆಗಳ ಕಾಟವನ್ನು ತೊಲಗಿಸಬೇಕೆಂದು ಮೋಶೆ ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋಶೆ ಆರೋನರು ಫರೋಹನ ಬಳಿಯಿಂದ ಹೊರಟುಹೋದಾಗ ಮೋಶೆ ಯೆಹೋವನಿಗೆ ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಪ್ರಾರ್ಥನೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ, ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ಕಾಟದ ಬಗ್ಗೆ ಯೆಹೋವ ದೇವರಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:12
10 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.


ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು.


ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.


ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು.


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು.


ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು