ವಿಮೋಚನಕಾಂಡ 8:14 - ಪರಿಶುದ್ದ ಬೈಬಲ್14 ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಲು ದೇಶದಲ್ಲೆಲ್ಲಾ ದುರ್ವಾಸನೆ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು. ಅಧ್ಯಾಯವನ್ನು ನೋಡಿ |
ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.