Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:15 - ಪರಿಶುದ್ದ ಬೈಬಲ್‌

15 ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:15
24 ತಿಳಿವುಗಳ ಹೋಲಿಕೆ  

ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.


ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”


ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.


ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು.


ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.


ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು.


ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.


ಆದರೆ ಫರೋಹನು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ಜನರನ್ನು ಹೋಗಗೊಡಿಸಲಿಲ್ಲ.


ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.


ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು.


ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು