ವಿಮೋಚನಕಾಂಡ 8:17 - ಪರಿಶುದ್ದ ಬೈಬಲ್17 ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು ಅಧ್ಯಾಯವನ್ನು ನೋಡಿ |