Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:20 - ಪರಿಶುದ್ದ ಬೈಬಲ್‌

20 ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:20
11 ತಿಳಿವುಗಳ ಹೋಲಿಕೆ  

ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ,


ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ!


ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.


ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.


ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.


ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿಕೊಳ್ಳುವವು; ನೆಲದ ಮೇಲೆಲ್ಲಾ ಇರುವವು.


ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.


ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು