ವಿಮೋಚನಕಾಂಡ 8:22 - ಪರಿಶುದ್ದ ಬೈಬಲ್22 ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು. ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.