ವಿಮೋಚನಕಾಂಡ 8:24 - ಪರಿಶುದ್ದ ಬೈಬಲ್24 ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರ ಹಾಗೆಯೇ ಮಾಡಿದರು. ನೊಣಗಳು ಫರೋಹನ ಅರಮನೆಯಲ್ಲೂ ಅವನ ಪರಿವಾರದವರ ಮನೆಗಳಲ್ಲೂ ಸಮಸ್ತ ಈಜಿಪ್ಟ್ ದೇಶದಲ್ಲೂ ಬಹಳವಾಗಿ ತುಂಬಿಕೊಂಡವು. ಅವುಗಳಿಂದ ದೇಶ ಹಾಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ಹಾಗೆಯೇ ಮಾಡಿದನು; ವಿಷದ ಹುಳಗಳು ಫರೋಹನ ಅರಮನೆಯಲ್ಲಿಯೂ ಅವನ ಪರಿವಾರದವರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು; ಅವುಗಳಿಂದ ದೇಶವು ಹಾಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರು ಹಾಗೆಯೇ ಮಾಡಲಾರಂಭಿಸಿದರು. ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಈಜಿಪ್ಟ್ ದೇಶದಲ್ಲಿಯೂ ಬಂದವು. ನೊಣಗಳಿಂದ ದೇಶವು ಹಾಳಾಗಿ ಹೋಯಿತು. ಅಧ್ಯಾಯವನ್ನು ನೋಡಿ |