Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:26 - ಪರಿಶುದ್ದ ಬೈಬಲ್‌

26 ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಮೋಶೆ - ಹಾಗೆ ಮಾಡುವದು ಯುಕ್ತವಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞದಲ್ಲಿ ಕೊಡುವ ಆಹುತಿ ಐಗುಪ್ತ್ಯರಿಗೆ ನಿಷೇಧ. ನಿಷಿದ್ಧವೆಂದು ಐಗುಪ್ತ್ಯರು ತಿಳುಕೊಂಡಿರುವ ಆಹುತಿಯನ್ನು ನಾವು ಅವರ ಕಣ್ಣಿನ ಮುಂದೆ ಮಾಡಿದರೆ ಅವರು ನಮ್ಮನ್ನು ಕೊಲ್ಲುವದಕ್ಕೆ ಕಲ್ಲೆಸೆಯುವರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:26
11 ತಿಳಿವುಗಳ ಹೋಲಿಕೆ  

ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.


ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.


“ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು