ವಿಮೋಚನಕಾಂಡ 8:6 - ಪರಿಶುದ್ದ ಬೈಬಲ್6 ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆರೋನನು ಐಗುಪ್ತದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ಮುಚ್ಚಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು. ಅಧ್ಯಾಯವನ್ನು ನೋಡಿ |
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.