ವಿಮೋಚನಕಾಂಡ 9:1 - ಪರಿಶುದ್ದ ಬೈಬಲ್1 ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ಸರ್ವೇಶ್ವರ, ಮೋಶೆಗೆ ಹೇಳಿದ್ದೇನೆಂದರೆ: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು: ‘ಹಿಬ್ರಿಯರ ದೇವರಾದ ಸರ್ವೇಶ್ವರನು ತನ್ನನ್ನು ಆರಾಧಿಸಲು ತನ್ನ ಜನರಿಗೆ ನಿಮ್ಮಿಂದ ಹೋಗಲು ಅಪ್ಪಣೆಯಾಗಬೇಕೆಂದು ಹೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬದಾಗಿ ಹೇಳಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನಂತರ ಯೆಹೋವ ದೇವರು ಮೋಶೆಗೆ ಹೇಳಿದ್ದೇನಂದರೆ, “ಫರೋಹನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.” ಅಧ್ಯಾಯವನ್ನು ನೋಡಿ |