ವಿಮೋಚನಕಾಂಡ 9:10 - ಪರಿಶುದ್ದ ಬೈಬಲ್10 ಆದ್ದರಿಂದ ಮೋಶೆ ಆರೋನರು ಒಲೆಯಿಂದ ಬೂದಿಯನ್ನು ತೆಗೆದುಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡರು. ಅವರು ಬೂದಿಯನ್ನು ಗಾಳಿಯಲ್ಲಿ ತೂರಿದಾಗ ಜನರ ಮೇಲೂ ಪ್ರಾಣಿಗಳ ಮೇಲೂ ಹುಣ್ಣುಗಳಾಗತೊಡಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೋಶೆ ಮತ್ತು ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು. ಮೋಶೆ ಆ ಬೂದಿಯನ್ನು ಆಕಾಶಕ್ಕೆ ತೂರಿದನು. ಅದು ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೋಶೆ ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು; ಮೋಶೆಯು ಆ ಬೂದಿಯನ್ನು ಆಕಾಶಕ್ಕೆ ತೂರಲಾಗಿ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹುಣ್ಣಾಗುವ ಬೊಕ್ಕೆಗಳನ್ನೆಬ್ಬಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು. ಅಧ್ಯಾಯವನ್ನು ನೋಡಿ |