ವಿಮೋಚನಕಾಂಡ 9:16 - ಪರಿಶುದ್ದ ಬೈಬಲ್16 ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.