Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:18 - ಪರಿಶುದ್ದ ಬೈಬಲ್‌

18 ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:18
14 ತಿಳಿವುಗಳ ಹೋಲಿಕೆ  

ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು.


ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.


ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ’” ಎಂದು ಹೇಳಿದರು.


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ಎಲೀಷನು, “ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರು ಬಾಗಿಲಿನಲ್ಲಿರುವ ಮಾರುಕಟ್ಟೆಯ ಸ್ಥಳದಲ್ಲಿ ಮಾರಲ್ಪಡುವುದು” ಎಂದು ಮೊದಲೇ ಹೇಳಿದ್ದನು.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.


ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.


“ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ’” ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.


ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ.


ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ.


ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು