ವಿಮೋಚನಕಾಂಡ 9:19 - ಪರಿಶುದ್ದ ಬೈಬಲ್19 ಈಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು’ ಎಂದು ಹೇಳಬೇಕು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದಕಾರಣ ಆಳುಗಳನ್ನು ಕಳಿಸಿ ನಿನ್ನ ಪಶುಪ್ರಾಣಿಗಳನ್ನೂ ನಿನ್ನ ಹೊಲಗದ್ದೆಯಲ್ಲಿ ಇರುವದೆಲ್ಲವನ್ನು ಭದ್ರಪಡಿಸು. ಮನೆಗೆ ಸೇರದೆ ಹೊರಗೆ ಇರುವ ಎಲ್ಲ ನರಮಾನವರೂ, ಪಶುಪ್ರಾಣಿಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು'.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದ ಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ ನಿನಗೆ ಅಡವಿಯಲ್ಲಿರುವದೆಲ್ಲವನ್ನೂ ಬೇಗ ಭದ್ರಮಾಡಿಸು. ಮನೆಯೊಳಗೆ ಬಾರದೆ ಬೈಲಿನಲ್ಲೇ ಇರುವ ಎಲ್ಲಾ ಮನುಷ್ಯರೂ ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗಿರುವುದರಿಂದ ಯಾರನ್ನಾದರೂ ಕಳುಹಿಸಿ ನಿನ್ನ ಪಶುಗಳನ್ನೂ, ಹೊಲದಲ್ಲಿ ನಿನಗಿರುವವುಗಳನ್ನೂ ಭದ್ರಪಡಿಸು. ಏಕೆಂದರೆ ಮನೆಗಳಿಗೆ ಬಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಆಲಿಕಲ್ಲಿನ ಮಳೆಯು ಸುರಿದು ಕೊಲ್ಲುವುದು,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |