Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:21 - ಪರಿಶುದ್ದ ಬೈಬಲ್‌

21 ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಅಡವಿಯಲ್ಲೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:21
11 ತಿಳಿವುಗಳ ಹೋಲಿಕೆ  

ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ,


ದೇವರೇ, ಮನುಷ್ಯನು ಎಷ್ಟರವನು? ನೀನು ಅವನ ಕಡೆಗೆ ಗಮನ ಕೊಡುವುದೇಕೆ?


ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.


ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ.


ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.


ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು.


ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು