Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:22 - ಪರಿಶುದ್ದ ಬೈಬಲ್‌

22 ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:22
7 ತಿಳಿವುಗಳ ಹೋಲಿಕೆ  

ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.


ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.


ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು