Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:23 - ಪರಿಶುದ್ದ ಬೈಬಲ್‌

23 ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು, ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯನ್ನು ಈಜಿಪ್ಟಿನಲ್ಲೆಲ್ಲಾ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆಯು ತನ್ನ ಕೋಲನ್ನು ಆಕಾಶಕ್ಕೆ ಚಾಚಿದಾಗ ಯೆಹೋವನು ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಉಂಟುಮಾಡಿದನು. ಸಿಡಿಲುಗಳು ನೆಲಕ್ಕೆ ಬಿದ್ದವು. ಯೆಹೋವನು ಐಗುಪ್ತದೇಶದ ಮೇಲೆ ಕಲ್ಲಿನ ಮಳೆಯನ್ನು ಸುರಿಸಿದನು. ಕಲ್ಲಿನ ಮಳೆಯು ಬಹು ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:23
22 ತಿಳಿವುಗಳ ಹೋಲಿಕೆ  

ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.


ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.


ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.


ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.


ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ.


ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.


ಆತನು ಆಕಾಶದಿಂದ ಕಲ್ಲುಗಳಂತಿರುವ ಆಲಿಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು