ವಿಮೋಚನಕಾಂಡ 9:24 - ಪರಿಶುದ್ದ ಬೈಬಲ್24 ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ. ಅಧ್ಯಾಯವನ್ನು ನೋಡಿ |