Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:29 - ಪರಿಶುದ್ದ ಬೈಬಲ್‌

29 ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:29
19 ತಿಳಿವುಗಳ ಹೋಲಿಕೆ  

ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.


ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,


ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,


“ಪ್ರತಿಯೊಂದೂ ಯೆಹೋವನದೇ, ಉನ್ನತವಾದ ಆಕಾಶವೂ ಯೆಹೋವನದೇ. ಈ ಭೂಮಿಯೂ, ಅದರಲ್ಲಿರುವ ಸಮಸ್ತವೂ ದೇವರಿಗೇ ಸೇರಿದ್ದು.


ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.


ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.


ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ.


ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೊ.


ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.


ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು