Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:3 - ಪರಿಶುದ್ದ ಬೈಬಲ್‌

3 ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾದಿಯಿಂದ ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ ಕುದುರೆ ಕತ್ತೆ ಒಂಟೆ ದನ ಕುರಿ ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯೆತ್ತಿ ಘೋರವ್ಯಾಧಿಯನ್ನುಂಟುಮಾಡುವನೆಂದು ತಿಳುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:3
9 ತಿಳಿವುಗಳ ಹೋಲಿಕೆ  

ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.


ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು