ವಿಮೋಚನಕಾಂಡ 9:34 - ಪರಿಶುದ್ದ ಬೈಬಲ್34 ಮಳೆಯೂ ಆಲಿಕಲ್ಲಿನ ಮಳೆಯೂ ಗುಡುಗೂ ನಿಂತುಹೋದದ್ದನ್ನು ಕಂಡ ಫರೋಹನು ಮತ್ತು ಅವನ ಅಧಿಕಾರಿಗಳು ಮತ್ತೆ ತಮ್ಮ ಹೃದಯಗಳನ್ನು ಕಠಿಣಪಡಿಸಿಕೊಂಡು ಪಾಪ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದರೆ ಆ ಮಳೆ, ಆ ಕಲ್ಲುಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನು ಹಾಗು ಅವನ ಪರಿವಾರದವರು ತಮ್ಮ ಹೃದಯಗಳನ್ನು ಪುನಃ ಕಠಿಣವಾಗಿಸಿಕೊಂಡು, ಪಾಪ ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದರೆ ಆ ಬಿರುಮಳೆಯೂ ಕಲ್ಲಿನ ಮಳೆಯೂ ಗುಡುಗೂ ನಿಂತು ಹೋದದ್ದನ್ನು ಫರೋಹನು ಕಂಡಾಗ ಅವನೂ ಅವನ ಪರಿವಾರದವರೂ ಇನ್ನೂ ಪಾಪಿಷ್ಠರಾಗಿ ತಮ್ಮ ಹೃದಯಗಳನ್ನು ಮೊಂಡುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮಳೆ, ಆಲಿಕಲ್ಲಿನ ಮಳೆ, ಗುಡುಗುಗಳು ನಿಂತುಹೋದದ್ದನ್ನು ಫರೋಹನು ನೋಡಿದಾಗ, ಅವನು ಪುನಃ ಪಾಪಮಾಡಿದನು. ತನ್ನ ಅಧಿಕಾರಿಗಳ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.