ವಿಮೋಚನಕಾಂಡ 9:7 - ಪರಿಶುದ್ದ ಬೈಬಲ್7 ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿ |