Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:1 - ಪರಿಶುದ್ದ ಬೈಬಲ್‌

1 ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:1
41 ತಿಳಿವುಗಳ ಹೋಲಿಕೆ  

ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.


ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.


ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:


ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.


ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.


ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:


ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ;


ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.


ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.


ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.


ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.


ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ.


ಯೆಹೋಯಾಕೀಮನು ಬಾಬಿಲೋನಿಗೆ ಸೆರೆಒಯ್ದ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶೆಯಲ್ತೀಯೇಲ್,


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಇಸ್ರೇಲರೆಲ್ಲರು ಅವನಿಗಾಗಿ ಅತ್ತು, ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು.


ಯೂದನು ಯೋಹಾನನ ಮಗನು. ಯೋಹಾನನು ರೇಸನ ಮಗನು. ರೇಸನು ಜೆರುಬಾಬೆಲನ ಮಗನು. ಜೆರುಬಾಬೆಲನು ಸಲಥಿಯೇಲನ ಮಗನು. ಸಲಥಿಯೇಲನು ಸೇರಿಯ ಮಗನು.


ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.


ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.


ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.


ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?


ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.”


ಹಗ್ಗಾಯನಿಗೆ ಮತ್ತೆ ಯೆಹೋವನಿಂದ ಸಂದೇಶವು ಬಂದಿತು. ಹಗ್ಗಾಯನು ಈ ಸಂದೇಶವನ್ನು ತಿಳಿಸಿದನು:


“ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.


ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು.


ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:


ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು