Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:11 - ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:11
13 ತಿಳಿವುಗಳ ಹೋಲಿಕೆ  

ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.


“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ಈ ರೀತಿಯಾಗಿ ನಿಮ್ಮ ಇಡೀ ಜನಾಂಗವೇ ನನ್ನಿಂದ ಕದ್ದುಕೊಂಡಿದ್ದಾರೆ. ಆದ್ದರಿಂದ ನಿಮಗೆ ದುರ್ದೆಶೆ ಸಂಭವಿಸುತ್ತಲಿದೆ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು