ಹಗ್ಗಾಯ 1:12 - ಪರಿಶುದ್ದ ಬೈಬಲ್12 ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು. ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.