Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:14 - ಪರಿಶುದ್ದ ಬೈಬಲ್‌

14 ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14-15 ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:14
19 ತಿಳಿವುಗಳ ಹೋಲಿಕೆ  

ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:


“ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


“ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.


ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.


ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು