ಹಗ್ಗಾಯ 1:5 - ಪರಿಶುದ್ದ ಬೈಬಲ್5 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ಏನು ನಡೆಯುತ್ತಿದೆಂಬುದರ ಬಗ್ಗೆ ಯೋಚಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ. ಅಧ್ಯಾಯವನ್ನು ನೋಡಿ |
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”