8 ಬೆಟ್ಟಗಳ ಮೇಲಕ್ಕೆ ಹೋಗಿ ಮರವನ್ನು ತಂದು ನನಗೆ ಆಲಯವನ್ನು ಕಟ್ಟಿರಿ. ಆಗ ನಾನು ನನ್ನ ನಿವಾಸದಲ್ಲಿ ಸಂತೋಷಿಸುವೆನು. ಆಗ ನಾನು ಗೌರವಿಸಲ್ಪಡುವೆನು.” ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.
ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!
ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.
‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”
ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.
ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.
ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.
ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.
ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.