ಹಗ್ಗಾಯ 1:9 - ಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ. ಅಧ್ಯಾಯವನ್ನು ನೋಡಿ |
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”