16 ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.
16 ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
16 ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.
16 ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.
16 ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”
ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.
ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.
ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”