Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:17 - ಪರಿಶುದ್ದ ಬೈಬಲ್‌

17 ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಕೈದುಡಿತದ ಫಲವನ್ನೆಲ್ಲಾ ಆನೆಕಲ್ಲು, ಕಾಡಿಗೆ, ಬಿಸಿಗಾಳಿ, ಇವುಗಳಿಂದ ಹಾಳು ಮಾಡಿ ನಿಮ್ಮನ್ನು ಬಾಧಿಸಿದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:17
32 ತಿಳಿವುಗಳ ಹೋಲಿಕೆ  

ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.


“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು.


“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


“ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ


ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು.


ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.


ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.


ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು