Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:19 - ಪರಿಶುದ್ದ ಬೈಬಲ್‌

19 ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದ್ರಾಕ್ಷೆ, ಅಂಜೂರ, ದಾಳಿಂಬರ, ಒಲೀವ, ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿವಸ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:19
19 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!


“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.


ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.


ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ?


ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು