ಹಗ್ಗಾಯ 2:2 - ಪರಿಶುದ್ದ ಬೈಬಲ್2 “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್ ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಜನಶೇಷ, ಇವರೆಲ್ಲರಿಗೆ ಹೀಗೆ ನುಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು. ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.