ಹಗ್ಗಾಯ 2:3 - ಪರಿಶುದ್ದ ಬೈಬಲ್3 ‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಆಲಯದ ಪೂರ್ವವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಾಗಿ ಕಾಣಿಸುತ್ತದಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ? ಅಧ್ಯಾಯವನ್ನು ನೋಡಿ |
ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.