Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:5 - ಪರಿಶುದ್ದ ಬೈಬಲ್‌

5 ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:5
26 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದ್ದರಿಂದ ಭಯಪಡಬೇಡಿ.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.


ಕೂಡಲೆ ಮೋಶೆಯು ನೆಲದ ಮೇಲೆ ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದನು.


‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು