Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:8 - ಪರಿಶುದ್ದ ಬೈಬಲ್‌

8 ‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಳ್ಳಿಯೆಲ್ಲಾ ನನ್ನದು ಬಂಗಾರವೆಲ್ಲಾ ನನ್ನದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:8
7 ತಿಳಿವುಗಳ ಹೋಲಿಕೆ  

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


“ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.


ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.


ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು