9 ‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”
9 ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9 ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.
9 ‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.
ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.
ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.
ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
ಬೆಟ್ಟಗಳ ಮೇಲಕ್ಕೆ ಹೋಗಿ ಮರವನ್ನು ತಂದು ನನಗೆ ಆಲಯವನ್ನು ಕಟ್ಟಿರಿ. ಆಗ ನಾನು ನನ್ನ ನಿವಾಸದಲ್ಲಿ ಸಂತೋಷಿಸುವೆನು. ಆಗ ನಾನು ಗೌರವಿಸಲ್ಪಡುವೆನು.” ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.
‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?